ಕನ್ನಡ ಜಾನಪದ




ಕನ್ನಡ ಜಾನಪದ


ಇವು ನೂರಾರು ವರ್ಷಗಳಿಂದ ಸಾವಿರಾರು ಜನಗಳ ಬಾಯಿಂದ ಹರಿದು ಬಂದ ನುಡಿಗಳು,ನಮ್ಮ ಹಳ್ಳಿಗಳಲ್ಲಿ ಕಲೋಪಾಸಕತ್ವವನ್ನು,ಸೃಜನಶೀಲತೆಯನ್ನು, ಮತ್ತು ಮಾಧುರ್ಯವನ್ನು ಹಳ್ಳಿಗರಿಗೆ ತಿಳಿಯದಂತೆ ಅವರ ಜೀವನ ವಿಧಾನವನ್ನಾಗಿ ಪರಿವರ್ತಿಸಿದ ಸಂಸ್ಕೃತಿಯೊಂದರ ಹೆಜ್ಜೆಗುರುತುಗಳು.

ಪ್ರತಿಯೊಂದು ಸಾಮಾಜವೂ ತನ್ನ ಪುರಾತನರ ಸಾರವನ್ನು ಹೀರಿ ತನ್ನ ಸದ್ಯದ ಬದುಕಿಗೊಂದು ಅರ್ಥವನ್ನೂ,ತನ್ನ ಸದ್ಯದ ಸಮಸ್ಯೆಗಳಿಗೊಂದು ಪರಿಹಾರವನ್ನೂ,ತನ್ನ ಭಕ್ತಿಗೊಂದು ರೂಪವನ್ನೂ -ಕಲೆ,ತಂತ್ರಜ್ಞಾನ ಇತ್ಯಾದಿಗಳ ಬೆಳವಣಿಗೆಯನ್ನೂ ಸಾಮುದಾಯಿಕವಾಗಿ ನಿರ್ವಹಿಸುತ್ತದೆ.

ಜಾನಪದ ?

  • ಪ್ರಾಯಶಃ ಸಹಸ್ರಾರು ವರ್ಷದ ಹಿಂದೆ ಜಗತ್ತಿನಲ್ಲೆಲ್ಲ ಇದ್ದುದ್ದು ಜಾನಪದವೊಂದೇ, ಮಾನವನು ತಾನು ಮಾಡುವ ಕೆಲಸಗಳಲ್ಲೆಲ್ಲಾ ತನ್ಮಯತೆಯನ್ನು ತುಂಬಲು ಮಾಡಿದ ಪ್ರಯತ್ನಗಳ ಸರಮಾಲೆಯೇ ಜಾನಪದವಾಗಿರಬಹುದು.
  • ಜಾನಪದ ತನ್ನ ಸುತ್ತಲಿನ ಪರಿಸ್ಥಿತಿಗೆ ತಕ್ಕಂತೆ ತಂತ್ರಜ್ಞಾನಗಳನ್ನೂ,ಅರೋಗ್ಯ ರಕ್ಷಣೆಗೆ ವೈದ್ಯಕೀಯವನ್ನು, ಪ್ರಕೃತಿಯ ಬಿರುಸಿಗೆ ಉತ್ತರವಾಗಿ ಭಕ್ತಿಯನ್ನೂ ಬೆಳೆಸಿಕೊಂಡಿರಬಹುದು.


Comments

Popular posts from this blog

ನಂದಿಕೋಲು