Siddaramaiah Resigns — ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
Siddaramaiah Resigns — ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಎರಡನೇ ಅವಧಿಗೆ ಕರ್ನಾಟಕ ಮುಖ್ಯಮಂತ್ರಯಾಗಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.
ಮುಖ್ಯಾಂಶಗಳು
- ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
- ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ
- ‘ಕೈ’ ಪಾಳಯದಲ್ಲಿನ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಬಳಿಕ ಡಿ.ಕೆ. ಶಿವಕುಮಾರ್ ಅವರ ತೀವ್ರ ಪೈಪೋಟಿಯ ಹೊರತಾಗಿಯೂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸಿಎಂ ರೇಸ್ನಲ್ಲಿದ್ದ ಡಿಕೆಶಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಗಿತ್ತು.
ಸಿದ್ದರಾಮಯ್ಯ ಕಣ್ಣೀರು
ಇಂದು ಬೆಳಿಗ್ಗೆ ಆಯೋಜಿಸಿದ್ದ ಉಪಹಾರಕೂಟದಲ್ಲಿ ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಸಚಿವರಿಗೆ ಖುದ್ದಾಗಿ ಸಿದ್ದರಾಮಯ್ಯ ತಿಳಿಸಿದ್ದರು. ಈ ವೇಳೆ ಭಾವುಕರಾದ ಅವರು ಕಣ್ಣೀರು ಹಾಕಿದ ಪ್ರಸಂಗವೂ ನಡೆದಿತ್ತು. ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ. ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ. ಜನರಿಗೆ ಒಳ್ಳೆಯ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಈ ವೇಳೆ ಸಲಹೆ ಕೂಡ ನೀಡಿದ್ದರು.

ಕಳೆದ ಒಂದು ವರ್ಷಗಳಿಂದಲೂ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಪ್ರಹಸನ ನಡೆದುಕೊಂಡೇ ಬಂದಿತ್ತು. ಸಿದ್ದರಾಮಯ್ಯ ಮತ್ತು ಡಿಕೆಶಿ ಬಣಗಳ ನಾಯಕರು ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು. ಈ ನಡುವೆ ಪಂಚರಾಜ್ಯ ಚುನಾವಣೆ ಬೆನ್ನಲ್ಲೇ ಉಭಯ ನಾಯಕರನ್ನು ದೆಹಲಿಗೆ ಕರೆದಿದ್ದ ಹೈಕಮಾಂಡ್ ನಾಯಕರು ಸುದೀರ್ಘ ಸಭೆ ನಡೆಸಿದ್ದರು. ಅಳೆದು ತೂಗಿ ಅಂತಿಮ ನಿರ್ಧಾರಕ್ಕೆ ಬಂದಿದ್ದ ವರಿಷ್ಠರು ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ ಸಿದ್ದರಾಮಯ್ಯನವರೀಗ ಪದತ್ಯಾಗ ಮಾಡಿದ್ದಾರೆ.
Comments
Post a Comment