Siddaramaiah Resigns — ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
Siddaramaiah Resigns — ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಎರಡನೇ ಅವಧಿಗೆ ಕರ್ನಾಟಕ ಮುಖ್ಯಮಂತ್ರಯಾಗಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. Siddaramaiah ಹೈಕಮಾಂಡ್ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಸಿದ್ದರಾಮಯ್ಯ ( Siddaramaiah ) ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ. ಮುಖ್ಯಾಂಶಗಳು ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ‘ಕೈ’ ಪಾಳಯದಲ್ಲಿನ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಬಳಿಕ ಡಿ.ಕೆ. ಶಿವಕುಮಾರ್ ಅವರ ತೀವ್ರ ಪೈಪೋಟಿಯ ಹೊರತಾಗಿಯೂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಅ...